ನದಿಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಜೋಗ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಈ ವೈಭವವನ್ನು ಕಣ್ತುಂಬಿಕೊಳ್ಳಲು ಭಾನುವಾರದಂದು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜೋಗಕ್ಕೆ ಆಗಮಿಸಿದ್ದಾರೆ.
ಲಾಕ್ ಡೌನ್ ಸಡಿಲಿಕೆ ಬಳಿಕ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ಮಾಡಿಕೊಡಲಾಗಿತ್ತಾದರೂ ಮುಖ್ಯ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ಮಾಡಲಾಗುತ್ತಿತ್ತು. ಅಲ್ಲದೆ ಥರ್ಮಲ್ ಸ್ಕ್ರೀನಿಂಗ್ ಕಾರಣಕ್ಕೆ ವಾಹನಗಳನ್ನು ಒಳ ಬಿಡಲಾಗುತ್ತಿರಲಿಲ್ಲ.
ಆದರೆ ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ ಕಾರಣ ಮಧ್ಯಾಹ್ನದ ಬಳಿಕ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ಸ್ಥಗಿತಗೊಳಿಸಲಾಗಿದೆ. ಜೊತೆಗೆ ವಾಹನಗಳ ಪಾರ್ಕಿಂಗ್ ಗೆ ಒಳಭಾಗದಲ್ಲಿ ಅವಕಾಶ ಕಲ್ಪಿಸಿಕೊಡಲಾಯಿತು. ಕೊರೊನಾ ಆತಂಕದ ನಡುವೆಯೂ ಪ್ರವಾಸಿಗರು ಜಲಪಾತದ ಸೌಂದರ್ಯವನ್ನು ಸವಿದರು.