
ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪ್ರಾಧ್ಯಾಪಕರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇವರುಗಳ ರಜೆ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ದೇಶದಲ್ಲಿ ಕೊರೊನಾ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಶಾಲಾ – ಕಾಲೇಜುಗಳಿಗೆ ರಾಜ್ಯದಲ್ಲಿ ರಜೆ ಘೋಷಿಸಿದ್ದು, ಹೀಗಾಗಿ ಉನ್ನತ ಶಿಕ್ಷಣ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಬೋಧಕ ಸಿಬ್ಬಂದಿಗೆ ಜುಲೈ 2ರ ವರೆಗೆ ರಜೆ ಘೋಷಿಸಲಾಗಿತ್ತು.
ಇದೀಗ ಮತ್ತೊಂದು ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಪ್ರಾಧ್ಯಾಪಕರಿಗೆ ರಜೆ ಅವಧಿಯನ್ನು ಜುಲೈ 3 ರಿಂದ ಜುಲೈ 15ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಹಾಗೂ ಜುಲೈ 16ರಂದು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.