alex Certify ವಿಶ್ವವಿದ್ಯಾಲಯ ಹಾಗೂ ಕಾಲೇಜು ಪ್ರಾಧ್ಯಾಪಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವವಿದ್ಯಾಲಯ ಹಾಗೂ ಕಾಲೇಜು ಪ್ರಾಧ್ಯಾಪಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪ್ರಾಧ್ಯಾಪಕರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇವರುಗಳ ರಜೆ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ದೇಶದಲ್ಲಿ ಕೊರೊನಾ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಶಾಲಾ – ಕಾಲೇಜುಗಳಿಗೆ ರಾಜ್ಯದಲ್ಲಿ ರಜೆ ಘೋಷಿಸಿದ್ದು, ಹೀಗಾಗಿ ಉನ್ನತ ಶಿಕ್ಷಣ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಬೋಧಕ ಸಿಬ್ಬಂದಿಗೆ ಜುಲೈ 2ರ ವರೆಗೆ ರಜೆ ಘೋಷಿಸಲಾಗಿತ್ತು.

ಇದೀಗ ಮತ್ತೊಂದು ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಪ್ರಾಧ್ಯಾಪಕರಿಗೆ ರಜೆ ಅವಧಿಯನ್ನು ಜುಲೈ 3 ರಿಂದ ಜುಲೈ 15ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಹಾಗೂ ಜುಲೈ 16ರಂದು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...