ಕೊರೊನಾ ಲಾಕ್ಡೌನ್ ಕಾರಣಕ್ಕೆ ಕಾಲೇಜುಗಳಿಗೆ ರಜೆ ಘೋಷಿಸಿದ್ದ ಕಾರಣ ಪಾಠ ಪ್ರವಚನಗಳು ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರೆ ತರಗತಿಗಳ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಉತ್ತೀರ್ಣಗೊಳಿಸಲಾಗಿದೆ.
ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಈ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬಿಇ, ಬಿಆರ್ಕ್, ಬಿಪ್ಲ್ಯಾನ್ ಹಾಗೂ ಸ್ನಾತಕೋತ್ತರ ಪದವಿ ಎಂಬಿಎ, ಎಂಸಿಎ, ಎಂಟೆಕ್ ಮತ್ತು ಎಂಆರ್ಕ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ ಎಂದು ವಿಟಿಯು ಕುಲಪತಿ ಪ್ರೊ. ಕರಿಸಿದ್ದಪ್ಪ ತಿಳಿಸಿದ್ದಾರೆ.
ಆಗಸ್ಟ್ 1 ರಿಂದ 14 ರವರೆಗೆ ಆನ್ಲೈನ್ ತರಗತಿಗಳು ನಡೆಯಲಿದ್ದು, ಆಗಸ್ಟ್ 17 ರಿಂದ 24 ರವರೆಗೆ ಪ್ರಾಜೆಕ್ಟ್ ಕುರಿತು ಆನ್ಲೈನ್ ತರಗತಿ ನಡೆಯಲಿದೆ. ಆಗಸ್ಟ್ 25ರ ನಂತರ ಆಫ್ಲೈನ್ ಪರೀಕ್ಷೆಗಳ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.