alex Certify ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುರಿತಂತೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುರಿತಂತೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಕಾಲೇಜುಗಳಿಗೆ ರಜೆ ಘೋಷಿಸಿದ್ದ ಕಾರಣ ಪಾಠ ಪ್ರವಚನಗಳು ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರೆ ತರಗತಿಗಳ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಉತ್ತೀರ್ಣಗೊಳಿಸಲಾಗಿದೆ.

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಈ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬಿಇ, ಬಿಆರ್ಕ್, ಬಿಪ್ಲ್ಯಾನ್ ಹಾಗೂ ಸ್ನಾತಕೋತ್ತರ ಪದವಿ ಎಂಬಿಎ, ಎಂಸಿಎ, ಎಂಟೆಕ್ ಮತ್ತು ಎಂಆರ್ಕ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ ಎಂದು ವಿಟಿಯು ಕುಲಪತಿ ಪ್ರೊ. ಕರಿಸಿದ್ದಪ್ಪ ತಿಳಿಸಿದ್ದಾರೆ.

ಆಗಸ್ಟ್ 1 ರಿಂದ 14 ರವರೆಗೆ ಆನ್ಲೈನ್ ತರಗತಿಗಳು ನಡೆಯಲಿದ್ದು, ಆಗಸ್ಟ್ 17 ರಿಂದ 24 ರವರೆಗೆ ಪ್ರಾಜೆಕ್ಟ್ ಕುರಿತು ಆನ್ಲೈನ್ ತರಗತಿ ನಡೆಯಲಿದೆ. ಆಗಸ್ಟ್ 25ರ ನಂತರ ಆಫ್ಲೈನ್ ಪರೀಕ್ಷೆಗಳ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...