
ಇಂದು ಧರ್ಮಸ್ಥಳದ ಧರ್ಮಾಧಿಕಾರಿ ಪರಮ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರ ಜನ್ಮ ದಿನವಾಗಿದ್ದು, ಸಾಕಷ್ಟು ರಾಜಕೀಯ ಗಣ್ಯರು ಶುಭಕೋರಿದ್ದಾರೆ.
ಸಿಎಂ ಯಡಿಯೂರಪ್ಪ ಅವರು ಕೂಡ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ವೀರೇಂದ್ರ ಹೆಗ್ಗಡೆ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದಂದು ಅವರಿಗೆ ಭಕ್ತಿಪೂರ್ವಕ ಶುಭಕಾಮನೆಗಳು.
ಶ್ರೀ ಮಂಜುನಾಥ ಸ್ವಾಮಿಯು ತಮಗೆ ಉತ್ತಮ ಆರೋಗ್ಯವನ್ನು ಶಿಕ್ಷಣ, ಸ್ತ್ರೀಶಕ್ತಿ, ಗ್ರಾಮೀಣಾಭಿವೃದ್ದಿ ಮೊದಲಾದ ಹಲವಾರು ಕ್ಷೇತ್ರಗಳಲ್ಲಿ ನಿಮ್ಮ ಸೇವಾಕೈಂಕರ್ಯ ಇನ್ನೂ ದೀರ್ಘಕಾಲ ಯಶಸ್ವಿಯಾಗಿ ಮುಂದುವರಿಯುವಂತೆ ಹರಸಲಿ ಎಂದು ಬರೆದುಕೊಂಡಿದ್ದಾರೆ.