ದೇಶಕ್ಕೆ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ ನಿಯಂತ್ರಣಕ್ಕಾಗಿ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಲಾಕ್ಡೌನ್ ಜಾರಿಯಲ್ಲಿದ್ದು, ಇದರ ಪರಿಣಾಮವಾಗಿ ಸಾರ್ವಜನಿಕರು ಮಾತ್ರವಲ್ಲದೆ ಸರ್ಕಾರಗಳು ಸಹ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.
ಹೀಗಾಗಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಪರದಾಡುವಂತಾಗಿದ್ದು, ಅಲ್ಲದೆ ವೇತನ ಕಡಿತ ಮಾಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿತ್ತು. ಈ ಎಲ್ಲದರ ಮಧ್ಯೆ ರಾಜ್ಯದ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜು ಸಿಬ್ಬಂದಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಖಾಸಗಿ ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕ, ಬೋಧಕೇತರ ಸಿಬ್ಬಂದಿಯ ಮೇ, ಜೂನ್, ಜುಲೈ ವೇತನಕ್ಕಾಗಿ ರಾಜ್ಯ ಸರ್ಕಾರ 143.37 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.