alex Certify ವೇತನದ ನಿರೀಕ್ಷೆಯಲ್ಲಿದ್ದ ಅನುದಾನಿತ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇತನದ ನಿರೀಕ್ಷೆಯಲ್ಲಿದ್ದ ಅನುದಾನಿತ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್

ದೇಶಕ್ಕೆ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ ನಿಯಂತ್ರಣಕ್ಕಾಗಿ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಲಾಕ್ಡೌನ್ ಜಾರಿಯಲ್ಲಿದ್ದು, ಇದರ ಪರಿಣಾಮವಾಗಿ ಸಾರ್ವಜನಿಕರು ಮಾತ್ರವಲ್ಲದೆ ಸರ್ಕಾರಗಳು ಸಹ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.

ಹೀಗಾಗಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಪರದಾಡುವಂತಾಗಿದ್ದು, ಅಲ್ಲದೆ ವೇತನ ಕಡಿತ ಮಾಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿತ್ತು. ಈ ಎಲ್ಲದರ ಮಧ್ಯೆ ರಾಜ್ಯದ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜು ಸಿಬ್ಬಂದಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಖಾಸಗಿ ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕ, ಬೋಧಕೇತರ ಸಿಬ್ಬಂದಿಯ ಮೇ, ಜೂನ್, ಜುಲೈ ವೇತನಕ್ಕಾಗಿ ರಾಜ್ಯ ಸರ್ಕಾರ 143.37 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...