ದೇಶದಲ್ಲಿ ಕೊರೊನಾ ಮಹಾಮಾರಿ ವಕ್ಕರಿಸಿಕೊಂಡ ಕಾರಣ ಕೇಂದ್ರ ಸರ್ಕಾರ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ದೇಶದಾದ್ಯಂತ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ಬಹುತೇಕ ಚಟುವಟಿಕೆಗಳು ಬಂದ್ ಆಗಿದ್ದವು.
ಇದೀಗ ಐದನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದರೂ ಸಹ ಬಹಳಷ್ಟು ಸಡಿಲಿಕೆಗಳನ್ನು ನೀಡಲಾಗಿದೆ. ಹೀಗಾಗಿ ಬಸ್ ಸಂಚಾರವೂ ಕೂಡಾ ಆರಂಭವಾಗಿದೆ. ಕಟ್ಟುನಿಟ್ಟಾದ ಲಾಕ್ ಡೌನ್ ಜಾರಿಯಲ್ಲಿದ್ದ ಕಾರಣ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಆ ಸಂದರ್ಭದಲ್ಲಿ ತೀವ್ರ ಆರ್ಥಿಕ ನಷ್ಟ ಉಂಟಾಗಿತ್ತು.
ಇದೀಗ ಈ ಬಸ್ ಗಳ ಸಂಚಾರ ಆರಂಭವಾಗಿದ್ದರೂ ಸಹ ತಮಗೆ ಪೂರ್ಣ ವೇತನ ಸಿಗುತ್ತದೋ ಇಲ್ಲವೋ ಎಂಬ ಆತಂಕ ಸಿಬ್ಬಂದಿಗಿತ್ತು. ಇದೀಗ ಆತಂಕ ದೂರವಾಗಿದೆ ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಈಶಾನ್ಯ ಕರ್ನಾಟಕ ಸಾರಿಗೆ ಸಿಬ್ಬಂದಿಗಳ ವೇತನ ಪಾವತಿಗೆ ಅಗತ್ಯವಿದ್ದ 325.01 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ.