ರಾಜ್ಯದಲ್ಲಿ ಆರ್ಭಟಿಸುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳು ಸಹ ಈ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಆದರೆ ವೈದ್ಯಕೀಯ ಬೋಧಕ ಸಿಬ್ಬಂದಿ ವೇತನ ಪರಿಷ್ಕರಣೆ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯ ವೇತನ ಹೆಚ್ಚಿಸಲು ಬಹುಕಾಲದಿಂದ ಬೇಡಿಕೆ ಇಡಲಾಗುತ್ತಿದ್ದರೂ ಸರ್ಕಾರ ಇದಕ್ಕೆ ಸ್ಪಂದಿಸಿರಲಿಲ್ಲ.
ಇದೀಗ ವೈದ್ಯಕೀಯ ಬೋಧಕ ಸಿಬ್ಬಂದಿ ವೇತನ ಪರಿಷ್ಕರಣೆ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯ ವೇತನ ಹೆಚ್ಚಿಸಿ ಸರ್ಕಾರ ಆದೇಶಿಸಿದ್ದು, ವೈದ್ಯಕೀಯ ಬೋಧಕ ಸಿಬ್ಬಂದಿ ವೇತನವನ್ನು 7ನೇ ವೇತನ ಆಯೋಗದ ಅನ್ವಯ ಪರಿಷ್ಕರಣೆ ಮಾಡಲಾಗಿದೆ ಎಂದು ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.