ಬೆಳಗಾವಿ: ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಳಗಾವಿ ಮೂರನೇ ಸತ್ರ ಹಾಗೂ ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ.
2017ರಲ್ಲಿ ನಡೆದಿದ್ದ ಪ್ರಕರಣ ಇದಾಗಿದ್ದು, ಅಪರಾಧಿಗಳಾದ ಸಂಜು ದಡ್ಡಿ, ಸುರೇಶ್ ಬೆಳಗಾವಿ, ಮಹೇಶ್, ಸುನೀಲ್ ಡುಮ್ಮಗೋಳ, ಸೋಮಶೇಖರ್ ಗೆ ಇದೀಗ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.
ವೈದ್ಯಕೀಯ ವಿದ್ಯಾರ್ಥಿನಿ ತನ್ನ ಸ್ನೇಹಿತನ ಜೊತೆ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡಕ್ಕೆ ತೆರಳಿದ್ದಳು. ಈ ವೇಳೆ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದ ಯುವಕರ ಗುಂಪು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಕಾಕತಿ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.