alex Certify ವೈದ್ಯನ ಜತೆ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ರಾ ಸಂಜನಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯನ ಜತೆ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ರಾ ಸಂಜನಾ…?

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ನಟಿ ಸಂಜನಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಮನೆಯಲ್ಲಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ. ಈ ನಡುವೆ ನಟಿ ಸಂಜನಾ ಬಗ್ಗೆ ಹಲವು ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದೆ.

ನಟಿ ಸಂಜನಾ ಮಾಧ್ಯಮಗಳ ಮುಂದೆ ತನಗಿನ್ನೂ ಮದುವೆಯೇ ಆಗಿಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ ಪೊಲೀಸರ ದಾಳಿ ವೇಳೆ ಸಂಜನಾ ತಂದೆ ಸಂಜನಾ ಪತಿಯೇ ತಮಗೆ ಅನಾರೋಗ್ಯವಾದಾಗ ಚಿಕಿತ್ಸೆ ನೀಡುತ್ತಿದ್ದರು ಎಂದಿರುವುದು ಅಚ್ಚರಿಗೆ ಕಾರಣವಾಗಿದೆ.

ನಟಿ ಸಂಜನಾ ವೈದ್ಯರೊಬ್ಬರ ಜತೆ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದರು ಎಂದೂ ಕೂಡ ಹೇಳಲಾಗುತ್ತಿದೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆಯೇ ಡಾಕ್ಟರ್ ಗೆ ಕಾಲ್ ಮಾಡಬೇಕು ಎಂದಿದ್ದಾರೆ. ಅಲ್ಲದೇ ಅಕ್ಕಪಕ್ಕದ ಮನೆಯವರಿಗೂ ಡಾಕ್ಟರ್ ಗೆ ಕಾಲ್ ಮಾಡಿ, ವಕೀಲರ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ. ನಟಿ ಸಂಜನಾ ಅವರಿಗೆ ಬಿಎಂಡ್ಬ್ಲೂಕಾರ್, ಫ್ಲ್ಯಾಟ್ ಕೂಡ ಕೊಡಿಸಿದ್ದು, ಇದೇ ಡಾಕ್ಟರ್ ಎಂಬ ಮಾಹಿತಿ ಕೂಡ ಲಭ್ಯವಾಗಿದೆ ಎನ್ನಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...