ಕೆಲಸದ ಸಮಯದಲ್ಲಿ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪಿಸಿ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧ 19 ವರ್ಷದ ನರ್ಸ್ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಈ ನರ್ಸ್ ಅದೇ ಆಸ್ಪತ್ರೆಯಲ್ಲಿ ಒ.ಟಿ. ಟೆಕ್ನೀಷಿಯನ್ ಎಂದು ಹೇಳಲಾಗುತ್ತಿದೆ.
ಹೌದು, ಡಾ.ಸಿ.ಎಂ.ಪರಮೇಶ್ವರ್ ಎಂಬುವವರ ವಿರುದ್ಧ ದೂರು ದಾಖಲು ಮಾಡಿರುವ ಈ ನರ್ಸ್ ಆರೋಪಗಳ ಪಟ್ಟಿಯನ್ನೇ ಪೊಲೀಸ್ ಠಾಣೆಗೆ ನೀಡಿದ್ದಾರೆ. ರಾತ್ರಿ ಸಮಯ ಎನ್ನದೇ ಫೋನ್ ಮೆಸೇಜ್ ಮಾಡುವ ಮೂಲಕ ನನಗೆ ಕಿರುಕುಳ ನೀಡಿದ್ದಾರೆ. ಆಪರೇಷನ್ ಥಿಯೇಟರ್‌ನಲ್ಲಿ ಕೆಲಸ ಮಾಡುವಾಗಲೂ ನನ್ನೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ಈ ಯುವತಿ ದೂರಿನಲ್ಲಿ ಹೇಳಿದ್ದಾರೆ.
ಇನ್ನು ನರ್ಸ್‌ನ ಲೈಂಗಿಕ ಕಿರುಕುಳ ಆರೋಪದ ದೂರಿನನ್ವಯ ಡಾ.ಸಿ.ಎಂ. ಪರಮೇಶ್ವರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ವೈದ್ಯರ ವಿರುದ್ಧ ಈ ಹಿಂದೆಯೂ ಆರೋಪಗಳು ಕೇಳಿ ಬಂದಿದ್ದವು. ಹಾಗೆಯೇ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದ್ದವು. ಇದೀಗ ಮತ್ತೊಮ್ಮೆ ಈ ವೈದ್ಯರ ವಿರುದ್ಧ ದೂರು ದಾಖಲಾಗಿದೆ.