alex Certify ವೈವಾಹಿಕ ಬದುಕಿಗೆ ಕಾಲಿಟ್ಟ ವಿನಾಯಕ ಜೋಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈವಾಹಿಕ ಬದುಕಿಗೆ ಕಾಲಿಟ್ಟ ವಿನಾಯಕ ಜೋಶಿ

ಸ್ಯಾಂಡಲ್ ವುಡ್ ನಟ, ಆರ್ ಜೆ ವಿನಾಯಕ ಜೋಶಿ ತಮ್ಮ ಗೆಳತಿ ವರ್ಷಾ ಬೆಳವಾಡಿ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಧರ್ಮಗಿರಿಯ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಜೋಶಿ, ವರ್ಷಾ ಬೆಳವಾಡಿ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ. ಮದುವೆ ಸಮಾರಂಭದಲ್ಲಿ ಕುಟುಂಬದ ಆಪ್ತರು ಹಾಗೂ ಕೆಲ ಸ್ನೇಹಿತರು ಮಾತ್ರ ಬಾಗಿಯಾಗಿದ್ದರು.

ವರ್ಷಾ ಬೆಳವಾಡಿ ರಾಷ್ಟ್ರ ಮಟ್ಟದ ಬ್ಯಾಡ್ಮಿಂಟನ್ ಆಟಗಾರ್ತಿ. ಜೋಶಿ ಹಾಗೂ ವರ್ಷಾ ಬಾಲ್ಯದ ಸ್ನೇಹಿತರು. ಪ್ರಸ್ತುತ ವರ್ಷಾ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೊರೊನಾ ವೈರಸ್ ಹಿನ್ನಲೆಯಲ್ಲಿ ಮದುವೆ ಸಮಾರಂಭಗಳಿಗೆ ಸರ್ಕಾರ, ಮಾರ್ಗಸೂಚಿ ಹೊರಡಿಸಿದ್ದು, ಕೆಲವೇ ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಿದೆ. ಈ ಹಿನ್ನಲೆಯಲ್ಲಿ ವೈರಸ್ ನಿಯಂತ್ರಣಕ್ಕೆ ಬಂದ ಬಳಿಕ ಸ್ನೇಹಿತರಿಗಾಗಿ ಅದ್ಧೂರಿ ಕಾರ್ಯಕ್ರಮ ಏರ್ಪಡಿಸಲಿದ್ದಾರಂತೆ ವಿನಾಯಕ ಜೋಶಿ

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...