alex Certify ಶಶಿಕಲಾಗೆ ಕೋವಿಡ್ ಬೆನ್ನಲ್ಲೆ ಆಸ್ಪತ್ರೆಗೆ ದಾಖಲಾದ ಆಪ್ತೆ ಇಳವರಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಶಿಕಲಾಗೆ ಕೋವಿಡ್ ಬೆನ್ನಲ್ಲೆ ಆಸ್ಪತ್ರೆಗೆ ದಾಖಲಾದ ಆಪ್ತೆ ಇಳವರಸಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ನಟರಾಜನ್ ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿರುವ ಬೆನ್ನಲ್ಲೇ ಇದೀಗ ಶಶಿಕಲಾ ಆಪ್ತೆ ಇಳವರಸಿ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಶಿಕಲಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ಪರೀಕ್ಷೆ ನಡೆಸಿದಾಗ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಇದೀಗ ಇಳವರಸಿ ಅವರಿಗೂ ಕೊರೊನಾ ಭೀತಿ ಆರಂಭವಾಗಿದ್ದು, ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇತ್ತೀಚೆಗಷ್ಟೇ ಇಳವರಸಿ ಕೂಡ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದರು. ಈ ಹಿನ್ನೆಲೆಯಲ್ಲಿ ಅವರ ಕುಟುಂಬ ಸಂಬಂಧಿಕರು ಇಳವರಸಿ ಅವರನ್ನೂ ಆಸ್ಪತ್ರೆಗೆ ಶಿಫ್ಟ್ ಮಾಡಿ ಕೋವಿಡ್ ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದರು ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...