ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಬರೋಬ್ಬರಿ 10 ಕೋಟಿ ರೂಪಾಯಿ ದಂಡವನ್ನು ಕೋರ್ಟ್ ಗೆ ಪಾವತಿ ಮಾಡಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 2017ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ, ಕೋರ್ಟ್ ಆದೇಶದ ಮೇರೆಗೆ ಇದೀಗ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ 10 ಕೋಟಿ ರೂ. ದಂಡವನ್ನು ಡಿಮ್ಯಾಂಡ್ ಡ್ರಾಫ್ಟ್ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶದ ಪ್ರಕಾರ ದಂಡದ ಮೊತ್ತವನ್ನು ಪಾವತಿಸಿರುವುದರಿಂದ ಜನವರಿಯಲ್ಲಿ ಶಶಿಕಲಾ ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.