ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 210 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7944 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು ಒಂದೇ ದಿನ 12 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು 179 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 4983 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 114 ಕ್ಕೆ ಏರಿಕೆಯಾಗಿದೆ. 2843 ಸಕ್ರಿಯ ಪ್ರಕರಣಗಳು ಇದ್ದು 73 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಪತ್ತೆಯಾದ ಹೊಸ ಪ್ರಕರಣಗಳ ಪೈಕಿ 58 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು, 21 ಮಂದಿ ಅಂತರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.