alex Certify ಶಾಕಿಂಗ್: ಸರ್ಕಾರದ ಅಧಿಕೃತ ಪೋರ್ಟಲ್ ಬಳಸಿ ಯುವಕನಿಂದ ನಕಲಿ ಕೋವಿಡ್ ನೆಗೆಟಿವ್ ವರದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಸರ್ಕಾರದ ಅಧಿಕೃತ ಪೋರ್ಟಲ್ ಬಳಸಿ ಯುವಕನಿಂದ ನಕಲಿ ಕೋವಿಡ್ ನೆಗೆಟಿವ್ ವರದಿ

ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ತಡವಾಗಿಯಾದರೂ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಇದರ ನಿಯಂತ್ರಣಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ರಾಜ್ಯದಲ್ಲಿ ಮೇ 4ರ ವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ವಾರಾಂತ್ಯದ ದಿನಗಳಂದು ಕಂಪ್ಲೀಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಒಬ್ಬರಿಂದ ಒಬ್ಬರಿಗೆ ಸೋಂಕು ಹರಡಬಾರದೆಂಬ ಕಾರಣಕ್ಕೆ ಪರೀಕ್ಷೆ ಹೆಚ್ಚಿಸಲಾಗಿದ್ದು, ಸೋಂಕು ಪೀಡಿತರು ಕಂಡುಬಂದರೆ ಅಂತವರಿಗೆ ಅಗತ್ಯವಿದ್ದರೆ ಆಸ್ಪತ್ರೆ ಸಾಧಾರಣ ಗುಣಲಕ್ಷಣಗಳನ್ನು ಹೊಂದಿದ್ದರೆ ಮನೆಯಲ್ಲೇ ಕ್ವಾರಂಟೈನ್ ಆಗಲು ಸೂಚಿಸಲಾಗುತ್ತಿದೆ. ಇದರ ಮಧ್ಯೆ ಯುವಕನೊಬ್ಬನ ಕೃತ್ಯ ಆಘಾತಕಾರಿಯಾಗುವಂತಿದೆ.

ಶಿಕ್ಷಕರಿಗೆ ಗುಡ್ ನ್ಯೂಸ್: ಶಾಲೆಗಳಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಿದ ಶಿಕ್ಷಣ ಇಲಾಖೆ

ವಿಜಯಪುರ ಜಿಲ್ಲೆಯ ಹೊಸಪೇಟೆಯಲ್ಲಿ ಈ ಘಟನೆ ನಡೆದಿದ್ದು ಶಿವು ಎಂಬ ಯುವಕ, ದೂರದ ಊರಿಗೆ ಹೋಗುವವರಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರದ ಅಧಿಕೃತ ಪೋರ್ಟಲ್ ಮೂಲಕ ಈಗಾಗಲೇ ಕೋವಿಡ್ ನೆಗಟಿವ್ ಬಂದಿರುವವರ ಐಡಿ ಬಳಸಿ ನಕಲಿ ವರದಿ ನೀಡುತ್ತಿದ್ದ ಎನ್ನಲಾಗಿದೆ. ಇದೀಗ ತಾಲೂಕು ವೈದ್ಯಾಧಿಕಾರಿ ನೀಡಿರುವ ದೂರಿನ ಅನ್ವಯ ಪಟ್ಟಣ ಠಾಣೆ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...