
ಸೆಪ್ಟೆಂಬರ್ 21ರಿಂದ ಶಾಲೆಗಳನ್ನು ತೆರೆದು 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಪಠ್ಯದ ಕುರಿತ ತಮ್ಮ ಅನುಮಾನಗಳನ್ನು ಪರಿಹರಿಸಿಕೊಳ್ಳಲು ಅವಕಾಶ ಮಾಡಿಕೊಡಲು ನಿರ್ಧರಿಸಿದ್ದ ಸರ್ಕಾರ ಈಗ ಮಹತ್ವದ ತೀರ್ಮಾನ ಕೈಗೊಂಡಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ – ಕಾಲೇಜುಗಳನ್ನು ತೆರೆಯದಿರಲು ನಿರ್ಧರಿಸಲಾಗಿದೆ. ಆ ಬಳಿಕ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.
ಸೆಪ್ಟೆಂಬರ್ 21ರಿಂದ ಶಾಲಾ – ಕಾಲೇಜುಗಳನ್ನು ತೆರೆಯಲು ಈ ಹಿಂದೆ ಸರ್ಕಾರ ನಿರ್ಧರಿಸಿದ್ದ ಕಾರಣ ಬಹಳಷ್ಟು ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಜೊತೆಗೆ ಕೊರೊನಾ ಸೋಂಕು ಕೂಡ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.