ಚಾಮರಾಜನಗರ: ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜು ಪಠ್ಯದಲ್ಲಿ ಶೇ.30 ರಷ್ಟು ಕಡಿತಗೊಳಿಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶೇ.30ರಷ್ಟು ಪಠ್ಯ ಕಡಿತಕ್ಕೆ ನಿರ್ಧರಿಸಲಾಗಿದ್ದು, ಈ ಬಗ್ಗೆ ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಶಿಕ್ಷಣ ಇಲಾಖೆ ಮಾಹಿತಿ ನೀಡಲಿದೆ. ಒಂದನೇ ತರಗತಿಯಿಂದ ರೆಗ್ಯೂಲರ್ ತರಗತಿ ಆರಂಭಿಸುವ ಬಗ್ಗೆ ಜನವರಿ 15ರ ನಂತರ ತಜ್ಞರ ವರದಿ ಆಧರಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇನ್ನು ಈಗಾಗಲೇ ಕೆಲ ಖಾಸಗಿ ಶಾಲೆಗಳು ಶೇ.30 ರಷ್ಟು ಶುಲ್ಕ ಕಡಿತ ಮಾಡಲು ಮುಂದೆ ಬಂದಿವೆ. ಆದರೆ ಶುಲ್ಕ ಕಡಿತ ಮಾಡುವುದರಿಂದ ಶಾಲಾ ಸಿಬ್ಬಂದಿಗಳ ವೇತನಕ್ಕೆ ತೊಂದರೆಯಾಗಲಿದೆ. ಹೀಗಾಗಿ ಪೋಷಕರು ಹಾಗೂ ಶಾಲಾ ಸಿಬ್ಬಂದಿಗಳನ್ನು ಗಮನದಲ್ಲಿಟ್ಟುಕೊಂಡು ಶೀಘ್ರದಲ್ಲಿಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.