ಕಳೆದ ಎರಡ್ಮೂರು ದಿನಗಳಿಂದ ಶಾಲೆ ಆರಂಭದ ಕುರಿತ ಮಾತುಗಳು ಕೇಳಿ ಬರುತ್ತಿವೆ. ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ಆರಂಭಿಸಲು ಹಾಗೂ ನಗರ ಪ್ರದೇಶದಲ್ಲಿ ಆನ್ ಲೈನ್ ಶಿಕ್ಷಣ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಾಲಾ ಆರಂಭದ ವದಂತಿ ಕುರಿತು ಸ್ಪಷ್ಟನೆ ನೀಡಿದ್ದಾರೆ. ಸದ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ಸರ್ಕಾರ ಯಾವುದೇ ಚಿಂತನೆಯನ್ನು ನಡೆಸಿಲ್ಲ. ಆ ನಿಟ್ಟಿನಲ್ಲಿ ಯೋಚಿಸಿಯೂ ಇಲ್ಲ ಎಂದಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ವೃಥಾ ಗೊಂದಲಕ್ಕೊಳಗಾಗಬಾರದು ಎಂದು ಹೇಳಿರುವ ಸಚಿವರು, ನಮಗೆ ಶಾಲೆಗಳ ಆರಂಭಕ್ಕಿಂತ ವಿದ್ಯಾರ್ಥಿಗಳ ಆರೋಗ್ಯವೇ ಮುಖ್ಯ. ಹಾಗಾಗಿ ಸದ್ಯಕ್ಕೆ ಶಾಲೆಗಳನ್ನು ಆರಂಭಿಸುವುದಿಲ್ಲ ಎಂದು ತಿಳಿಸಿದ್ದಾರೆ.