alex Certify ಶಾಲೆ ಆರಂಭವಾದರೂ ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆ ಆರಂಭವಾದರೂ ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು…!

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದು, ಹೀಗಾಗಿ ಶಾಲಾ – ಕಾಲೇಜುಗಳು ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿವೆ.

ಇದೀಗ ಕೇಂದ್ರ ಸರ್ಕಾರ ಲಾಕ್ ಡೌನ್ ನಲ್ಲಿ ಹಂತಹಂತವಾಗಿ ಸಡಿಲಿಕೆ ಮಾಡುತ್ತಾ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾಲಾ – ಕಾಲೇಜುಗಳ ಆರಂಭದ ಚರ್ಚೆ ಆರಂಭವಾಗಿದೆ. ಆದರೆ ಶಾಲೆಗಳ ಆರಂಭಕ್ಕೆ ಪೋಷಕರುಗಳಿಂದಲೇ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಯಾವುದೇ ಅಪಾಯದ ಅರಿವಿರದ ಚಿಕ್ಕ ಮಕ್ಕಳು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದರ ಮಹತ್ವ ಅರಿಯುವುದಾದರೂ ಹೇಗೆ ಎಂಬ ಪ್ರಶ್ನೆ ಪೋಷಕರದ್ದಾಗಿದೆ. ಅಲ್ಲದೆ ಶಾಲೆಗಳಲ್ಲಿ ಶಿಕ್ಷಕರು ಎಲ್ಲ ಮಕ್ಕಳ ಮೇಲೆ ನಿಗಾ ವಹಿಸಲು ಸಾಧ್ಯವೇ ಎಂದು ಕೇಳುತ್ತಿದ್ದಾರೆ.

ಚಿಕ್ಕ ಮಕ್ಕಳು ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಪ್ರಮಾಣದಲ್ಲಿ ಹೊಂದಿರುತ್ತಾರೆ. ಇಂತಹ ಸಂದರ್ಭದಲ್ಲಿ ರಿಸ್ಕ್ ತೆಗೆದುಕೊಂಡು ಮಕ್ಕಳನ್ನು ಶಾಲೆಗೆ ಕಳುಹಿಸುವುದರ ಅಗತ್ಯವಾದರೂ ಏನು ಎಂಬುದು ಪೋಷಕರ ಲೆಕ್ಕಾಚಾರ.

ಇದರ ಜೊತೆಗೆ ಪಾಳಿಗಳಲ್ಲಿ ಶಾಲೆ ಆರಂಭಿಸುವ ಕುರಿತೂ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೆ ಒಂದೊಮ್ಮೆ ಶಾಲೆಗಳು ಆರಂಭವಾದರೂ ಕೂಡ ನಮ್ಮ ಮಕ್ಕಳನ್ನು ಸದ್ಯಕ್ಕೆ ಕಳುಹಿಸುವುದಿಲ್ಲ ಎಂದು ಪೋಷಕರು ಹೇಳುತ್ತಿದ್ದಾರೆ. ಹೀಗಾಗಿ ಶಾಲೆಗಳ ಆರಂಭದ ಕುರಿತು ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...