ಅಕ್ಟೋಬರ್ 2ರಂದು ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಎಲ್ಲೆಡೆ ಆಚರಿಸಲಾಗಿದೆ. ಈ ಸಂದರ್ಭದಲ್ಲಿ ಇಬ್ಬರೂ ಮಹನೀಯರ ಸೇವೆಯನ್ನು ಸ್ಮರಿಸಲಾಗಿದೆ.
ಇದರ ಮಧ್ಯೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಕುವೆಂಪು ಶಾಲೆಯಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರದ ಬದಲು ಡಾ. ಬಾಬು ರಾಜೇಂದ್ರ ಪ್ರಸಾದ್ ಭಾವಚಿತ್ರವಿಟ್ಟು ಗೌರವ ಸಲ್ಲಿಸಿದ ಘಟನೆ ನಡೆದಿದೆ.
ಇಬ್ಬರೂ ಮಹನೀಯರ ಭಾವಚಿತ್ರಗಳು ಅಕ್ಕಪಕ್ಕದಲ್ಲಿದ್ದರಿಂದ ಕಣ್ತಪ್ಪಿನಿಂದಾಗಿ ಈ ಪ್ರಮಾದ ಸಂಭವಿಸಿದೆ ಎಂದು ಶಿಕ್ಷಕರು ಹೇಳಿದ್ದಾರೆ. ಈ ಕಾರ್ಯಕ್ರಮದ ನೋಟ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.