ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಖಾಲಿಯಾಗಿದ್ದ ಅನುದಾನಿತ ಪದವಿ ಪೂರ್ವ ಕಾಲೇಜುಗಳ 173 ಉಪನ್ಯಾಸಕರು ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 257 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ.
2015 ರ ಡಿಸೆಂಬರ್ 31ಕ್ಕೆ ನಿವೃತ್ತಿ, ಮರಣ, ರಾಜೀನಾಮೆ ಮತ್ತಿತರ ಕಾರಣಗಳಿಂದಾಗಿ ಈ ಹುದ್ದೆಗಳು ಖಾಲಿಯಾಗಿದ್ದು ಆದರೆ ಭರ್ತಿಯಾಗಿರಲಿಲ್ಲ. ಉಪನ್ಯಾಸಕರ ನೇಮಕಾತಿಗೆ ಅನುಮೋದನೆ ನೀಡಲಾಗಿತ್ತಾದರೂ ಬಳಿಕ ಪ್ರಕ್ರಿಯೆ ಸ್ಥಗಿತಗೊಂಡಿತ್ತು.
ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟವರಿಗೆ ‘ಗುಡ್ ನ್ಯೂಸ್’
ಇನ್ನು ಶಿಕ್ಷಕರ ಹುದ್ದೆಗಳ ಭರ್ತಿಗೂ ಈ ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿತ್ತಾದರೂ ಇದಕ್ಕೆ ಆರ್ಥಿಕ ಇಲಾಖೆಯ ಅನುಮೋದನೆ ಸಿಕ್ಕಿರಲಿಲ್ಲ. ಇದೀಗ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಪ್ರಯತ್ನದಿಂದಾಗಿ ಅನುಮೋದನೆ ನೀಡಲಾಗಿದ್ದು, 2021 – 22 ನೇ ಶೈಕ್ಷಣಿಕ ವರ್ಷ ಆರಂಭವಾದ ಬಳಿಕ ನೇಮಕಾತಿಗೆ ಆದೇಶ ನೀಡುವಂತೆ ಆರ್ಥಿಕ ಇಲಾಖೆ ಷರತ್ತು ವಿಧಿಸಿದೆ.