alex Certify ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಖಾಲಿಯಾಗಿದ್ದ ಅನುದಾನಿತ ಪದವಿ ಪೂರ್ವ ಕಾಲೇಜುಗಳ 173 ಉಪನ್ಯಾಸಕರು ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 257 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ.

2015 ರ ಡಿಸೆಂಬರ್ 31ಕ್ಕೆ ನಿವೃತ್ತಿ, ಮರಣ, ರಾಜೀನಾಮೆ ಮತ್ತಿತರ ಕಾರಣಗಳಿಂದಾಗಿ ಈ ಹುದ್ದೆಗಳು ಖಾಲಿಯಾಗಿದ್ದು ಆದರೆ ಭರ್ತಿಯಾಗಿರಲಿಲ್ಲ. ಉಪನ್ಯಾಸಕರ ನೇಮಕಾತಿಗೆ ಅನುಮೋದನೆ ನೀಡಲಾಗಿತ್ತಾದರೂ ಬಳಿಕ ಪ್ರಕ್ರಿಯೆ ಸ್ಥಗಿತಗೊಂಡಿತ್ತು.

ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟವರಿಗೆ ‘ಗುಡ್ ನ್ಯೂಸ್’

ಇನ್ನು ಶಿಕ್ಷಕರ ಹುದ್ದೆಗಳ ಭರ್ತಿಗೂ ಈ ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿತ್ತಾದರೂ ಇದಕ್ಕೆ ಆರ್ಥಿಕ ಇಲಾಖೆಯ ಅನುಮೋದನೆ ಸಿಕ್ಕಿರಲಿಲ್ಲ. ಇದೀಗ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಪ್ರಯತ್ನದಿಂದಾಗಿ ಅನುಮೋದನೆ ನೀಡಲಾಗಿದ್ದು, 2021 – 22 ನೇ ಶೈಕ್ಷಣಿಕ ವರ್ಷ ಆರಂಭವಾದ ಬಳಿಕ ನೇಮಕಾತಿಗೆ ಆದೇಶ ನೀಡುವಂತೆ ಆರ್ಥಿಕ ಇಲಾಖೆ ಷರತ್ತು ವಿಧಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...