ಕೊರೊನಾ ಸೋಂಕಿಗೊಳಗಾಗಿ ಹೋಂ ಐಸೋಲೇಶನ್ ನಲ್ಲಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರ ಆರೋಗ್ಯದಲ್ಲಿ ಶನಿವಾರ ಸಂಜೆ ತುಸು ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸುರೇಶ್ ಕುಮಾರ್ ಈಗ ಚೇತರಿಸಿಕೊಂಡಿದ್ದಾರೆನ್ನಲಾಗಿದ್ದು, ಸಂಪೂರ್ಣ ಗುಣಮುಖರಾದ ಬಳಿಕ ಮನೆಗೆ ತೆರಳುವ ಸಾಧ್ಯತೆ ಇದೆ.