alex Certify ಶಿಕ್ಷಿತ ಹೆಣ್ಣುಮಕ್ಕಳು ಪ್ರಶ್ನೆ ಮಾಡಿದರೆ ಜೈಲಿಗೆ ಹಾಕಲಾಗುತ್ತೆ; ದಿಶಾ ಬಂಧನಕ್ಕೆ ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಿತ ಹೆಣ್ಣುಮಕ್ಕಳು ಪ್ರಶ್ನೆ ಮಾಡಿದರೆ ಜೈಲಿಗೆ ಹಾಕಲಾಗುತ್ತೆ; ದಿಶಾ ಬಂಧನಕ್ಕೆ ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಸಾಮಾಜಿಕ ಹೋರಾಟಗಾರ್ತಿ ದಿಶಾ ರವಿ ಬಂಧನಕ್ಕೆ ಖಂಡನೆ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ ಎನ್ನುವ ಪ್ರಧಾನಿ ಮೋದಿ, ಶಿಕ್ಷಿತ ಹೆಣ್ಣುಮಕ್ಕಳು ತಮ್ಮನ್ನು ಪ್ರಶ್ನಿಸಿದರೆ ಬಂಧಿಸಿ ಜೈಲಿಗೆ ಹಾಕುತ್ತಾರೆ. ದಿಶಾ ಬಂಧನ ಪ್ರಜೆಗಳ ಮೇಲಿನ ದೌರ್ಜನ್ಯ ಮಾತ್ರವಲ್ಲ, ಮಹಿಳೆಯರ ಮೇಲಿನ ದೌರ್ಜನ್ಯವೂ ಹೌದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ವಿವಾದದ ಬೆನ್ನಲ್ಲೇ ಎಚ್ಚೆತ್ತ ಉಮೇಶ್ ಕತ್ತಿ; ಬಿಪಿಎಲ್ ಕಾರ್ಡ್ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ

ಇದೇ ವೇಳೆ ನಾರಿ ಮುನಿದರೆ ಮಾರಿ ಎಂಬುದು ನೆನಪಿರಲಿ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...