alex Certify ಶಿವಪ್ರಕಾಶ್ ಚಪ್ಪಿ ನಿರೀಕ್ಷಣಾ ಜಾಮೀನು ವಜಾ: ಸಂಜನಾ ಆಪ್ತನಿಗೂ ಮತ್ತೆ ಜೈಲೇ ಗತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಪ್ರಕಾಶ್ ಚಪ್ಪಿ ನಿರೀಕ್ಷಣಾ ಜಾಮೀನು ವಜಾ: ಸಂಜನಾ ಆಪ್ತನಿಗೂ ಮತ್ತೆ ಜೈಲೇ ಗತಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದ ಪ್ರಮುಖ ಆರೋಪಿ ಶಿವಪ್ರಕಾಶ್ ಚಪ್ಪಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಚಪ್ಪಿಯನ್ನು ಯಾವುದೇ ಸಂದರ್ಭದಲ್ಲಿ ಪೊಲೀಸರು ಬಂಧಿಸುವ ಸಾಧ್ಯತೆಯಿದೆ.

ಪ್ರಕರಣದ ಎ1 ಆರೋಪಿಯಾಗಿರುವ ಶಿವಪ್ರಕಾಶ್ ಚಪ್ಪಿ ಹಾಗೂ ಎ 2ನೇ ಆರೋಪಿ ವಿನಯ್ ಕುಮಾರ್ ಇಬ್ಬರೂ ತಲೆಮರೆಸಿಕೊಂಡಿದ್ದು, ಇವರಿಬ್ಬರು ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.

ಇನ್ನು ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿ ನಟಿ ಸಂಜನಾ ಆಪ್ತ ರಾಹುಲ್ ಥೋನ್ಸೆ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗೆ ಪರಪ್ಪನ ಅಗ್ರಹಾರ ಜೈಲೂಟವೇ ಫಿಕ್ಸ್ ಆದಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...