alex Certify ಶಿವಮೊಗ್ಗದಲ್ಲಿ ನಾಳೆ ‘ಬಂದ್’ ಬದಲಿಗೆ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ನಾಳೆ ‘ಬಂದ್’ ಬದಲಿಗೆ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಸಿಂಘು ಗಡಿಯಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯೆ ರೈತ ನಾಯಕರು ದೇಶದ ವಿವಿಧ ಭಾಗಗಳಲ್ಲಿ ಸಮಾವೇಶ ನಡೆಸುವ ಮೂಲಕ ನೂತನ ಕೃಷಿ ಕಾಯ್ದೆಯಿಂದ ಆಗುವ ಅನಾನುಕೂಲಗಳ ಕುರಿತು ಜನತೆಗೆ ಮನವರಿಕೆ ಮಾಡಿಕೊಡಲು ಮುಂದಾಗಿದ್ದಾರೆ.

ಅದರಂತೆ ಮಾರ್ಚ್ 20 ರಂದು ಶಿವಮೊಗ್ಗ ನಗರದ ಸೈನ್ಸ್ ಮೈದಾನದಲ್ಲಿ ರೈತರ ಮಹಾ ಪಂಚಾಯತ್ ಸಮಾವೇಶ ನಡೆದಿದ್ದು, ಇದರಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್, ಮುಖಂಡರಾದ ದರ್ಶನ್ ಪಾಲ್, ಯುದ್ಧವೀರ್ ಸಿಂಗ್ ಭಾಗವಹಿಸಿದ್ದು, ಕರ್ನಾಟಕದಲ್ಲೂ ಕೇಂದ್ರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ ಈ ರೈತ ಮುಖಂಡರು ಕರೆ ನೀಡಿದ್ದರು.

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಮಾರ್ಚ್ 26 ರಂದು ‘ಭಾರತ್ ಬಂದ್’ ಗೆ ಕರೆ ನೀಡಲಾಗಿದ್ದು, ಆದರೆ ಶಿವಮೊಗ್ಗದಲ್ಲಿ ಬಂದ್ ಬದಲಿಗೆ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಈ ವಿಚಾರ ತಿಳಿಸಿದ್ದು, ಎಲ್ಲ ರೈತರು, ದಲಿತರು ಮತ್ತು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಕೃಷಿ ಕಾಯ್ದೆಯ ಪ್ರತಿಗಳನ್ನು ಸುಡಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...