
ಇಂತವರ ಮಧ್ಯೆ ಈ ಅಧಿಕಾರಿ ವಿಭಿನ್ನವಾಗಿ ನಿಲ್ಲುತ್ತಾರೆ. ಹೌದು, ಶಿವಮೊಗ್ಗ ಜಿಲ್ಲೆಯ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ನಾಗರಾಜ್ ಈಗ ತಾವು ಮಾಡಿರುವ ಕಾರ್ಯಕ್ಕೆ ಸಾರ್ವಜನಿಕ ವಲಯದ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಶಿವಮೊಗ್ಗ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲ ಫಲಾನುಭವಿಗಳಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಹಲವು ಬಾರಿ ಸೂಚನೆ ನೀಡಿದರೂ ಪಾಲನೆಯಾಗಿರಲಿಲ್ಲ. ಈ ಸಂದರ್ಭದಲ್ಲಿ ನಾಗರಾಜ್, ಅವರ ಮನೆ ಮುಂದೆ ಧರಣಿ ಕುಳಿತಿದ್ದು, ಇದೀಗ ಫಲಾನುಭವಿಗಳು ಶೌಚಾಲಯ ನಿರ್ಮಿಸಿಕೊಳ್ಳಲು ಮುಂದಾಗಿದ್ದಾರೆ.