alex Certify ಶೌಚಾಲಯ ನಿರ್ಮಿಸಿಕೊಳ್ಳದವರ ಮನೆ ಮುಂದೆ ಧರಣಿ ಕೂತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೌಚಾಲಯ ನಿರ್ಮಿಸಿಕೊಳ್ಳದವರ ಮನೆ ಮುಂದೆ ಧರಣಿ ಕೂತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

ಸರ್ಕಾರದ ಕಾರ್ಯಕ್ರಮಗಳನ್ನು ಹಳ್ಳಿ ಹಳ್ಳಿಗಳಿಗೆ ತಲುಪಿಸಲೆಂದೇ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿರುತ್ತಾರೆ. ಆದರೂ ಕೂಡಾ ಕೆಲವೊಮ್ಮೆ ಹಳ್ಳಿಯ ಜನತೆ ನಿರ್ಲಕ್ಷ್ಯ ವಹಿಸುತ್ತಾರೆ. ಅಂತಹ ಸಂದರ್ಭಗಳಲ್ಲಿ ಬಹುತೇಕ ಅಧಿಕಾರಿಗಳು ಹೆಚ್ಚು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ.

ಇಂತವರ ಮಧ್ಯೆ ಈ ಅಧಿಕಾರಿ ವಿಭಿನ್ನವಾಗಿ ನಿಲ್ಲುತ್ತಾರೆ. ಹೌದು, ಶಿವಮೊಗ್ಗ ಜಿಲ್ಲೆಯ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ನಾಗರಾಜ್‌ ಈಗ ತಾವು ಮಾಡಿರುವ ಕಾರ್ಯಕ್ಕೆ ಸಾರ್ವಜನಿಕ ವಲಯದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಶಿವಮೊಗ್ಗ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲ ಫಲಾನುಭವಿಗಳಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಹಲವು ಬಾರಿ ಸೂಚನೆ ನೀಡಿದರೂ ಪಾಲನೆಯಾಗಿರಲಿಲ್ಲ. ಈ ಸಂದರ್ಭದಲ್ಲಿ ನಾಗರಾಜ್,‌ ಅವರ ಮನೆ ಮುಂದೆ ಧರಣಿ ಕುಳಿತಿದ್ದು, ಇದೀಗ ಫಲಾನುಭವಿಗಳು ಶೌಚಾಲಯ ನಿರ್ಮಿಸಿಕೊಳ್ಳಲು ಮುಂದಾಗಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...