ಬೆಂಗಳೂರು: ಸಚಿವ ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ಸೂಕ್ತವಾದದ್ದು. ಶೋಷಿತರ ಸೇವೆ ಮಾಡಲು ಅತ್ಯಂತ ಸೂಕ್ತ ವ್ಯಕ್ತಿ ಬಿ.ಶ್ರೀರಾಮುಲು ಅವರು. ಆಡಳಿತಾತ್ಮಕವಾಗಿ ಯಾರಿಗೆ ಯಾವ ಹುದ್ದೆ ನಿಭಾಯಿಸಲು ಸಾಧ್ಯ ಎಂಬುದನ್ನು ಚರ್ಚಿಸಿಯೇ ಮುಖ್ಯಮಂತ್ರಿಗಳು ಈ ನಿರ್ಧಾರ ಕೈಗೊಡಿರುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆ ಎಂಬುದು ಬಹಳ ದೊಡ್ಡ ಇಲಾಖೆ. ಅದನ್ನು ಸಾಮಾನ್ಯ ಇಲಾಖೆ ಎಂದು ಪರಿಗಣಿಸುವುದು ತಪ್ಪು. ಶ್ರೀರಾಮುಲು ಈ ಬಗ್ಗೆ ಅಸಮಾಧಾನಗೊಳ್ಳುವ ಅಗತ್ಯವಿಲ್ಲ. ಸಮಾಜ ಕಲ್ಯಾಣ ಇಲಾಖೆ ಯಾರಿಗೆ ನೀಡಿದರೆ ಸೂಕ್ತ ಎಂಬ ಬಗ್ಗೆ ಹಲವು ದಿಗಳಿಂದ ಚರ್ಚೆ ನಡೆದಿತ್ತು ಅದರಂತೆ ಈಗ ಶ್ರೀರಾಮುಲು ಅವರಿಗೆ ನೀಡಲಾಗಿದೆ ಎಂದರು.
ಇನ್ನು ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಇಲಾಖೆ ಎರಡೂ ಖಾತೆ ಒಬ್ಬ ಸಚಿವರ ಬಳಿ ಇದ್ದರೆ ನಿರ್ವಹಣೆ ಸುಲಭ ಎಂಬ ಕಾರಣಕ್ಕೆ ಸಚಿವ ಸುಧಾಕರ್ ಅವರಿಗೆ ಹೆಚ್ಚುವರಿಯಾಗಿ ಆರೋಗ್ಯ ಖಾತೆ ನೀಡಲಾಗಿದೆ ಎಂದು ಹೇಳಿದರು.