ರಾಜ್ಯದಲ್ಲಿ ಅನೇಕ ಮಕ್ಕಳು ನಿರ್ಲಕ್ಷ್ಯಕ್ಕೊಳಗಾಗಿದ್ದಾರೆ. ಮತ್ತೊಂದಿಷ್ಟು ಮಕ್ಕಳು ದೌರ್ಜನ್ಯಕ್ಕೆ, ಶೋಷಣೆಗೆ ಒಳಗಾಗಿದ್ದಾರೆ. ಅಷ್ಟೆ ಯಾಕೆ ಅನೇಕ ಮಕ್ಕಳು ಕುಟುಂಬದಿಂದ ಬೇರ್ಪಟ್ಟಿದ್ದಾರೆ. ಇಂತವರ ಕಷ್ಟ ಹಾಗೂ ಅವರ ಸಮಸ್ಯೆಗಳನ್ನು ಆಲಿಸಲು ಮತ್ತು ಮಕ್ಕಳು ದುರ್ಬಲ ಸ್ಥಿತಿಗೆ ತಲುಪದಿರುವಂತೆ ತಡೆಯಲು ಇದೀಗ ಸರ್ಕಾರ ಹೊಸ ಯೋಜನೆ ಜಾರಿಗೆ ತಂದಿದೆ.
ಟೆಲಿ-ಕೌನ್ಸಿಲಿಂಗ್ ಮೂಲಕ ಮಕ್ಕಳ ಮನಸ್ಸನ್ನು ತಿಳಿಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಆಪ್ತ ಸಮಾಲೋಚನೆ ಅಗತ್ಯವಿರುವ ಎಲ್ಲಾ ಮಕ್ಕಳಿಗೆ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಸಮಾಲೋಚನೆ ಬೇಕು ಎನ್ನುವ ಮಕ್ಕಳು ಅಥವಾ ಪೋಷಕರು ಟೋಲ್ ಫ್ರೀ ಸಂಖ್ಯೆ 18004252244 ಕರೆ ಮಾಡುವ ಮೂಲಕ ಉಚಿತವಾಗಿ ಆಪ್ತ ಸಮಾಲೋಚನೆ ಸೌಲಭ್ಯ ಪಡೆಯಬಹುದು.
ಇನ್ನು ಈ ಕಾರ್ಯಕ್ರಮ ನೀಡಲು ಹಾಗೂ ಮಕ್ಕಳಿಗೆ ಸಮಾಲೋಚನೆ ಮಾಡಲು 2 ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ. ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಎರಡು ಪಾಳಿಯಲ್ಲಿ ಇವರು ಕೆಲಸ ನಿರ್ವಹಿಸುತ್ತಾರೆ. ಹಾಗೂ ಮಕ್ಕಳು ತಮ್ಮ ಯಾವುದೇ ಸಮಸ್ಯೆ ಇದ್ದರೂ ಆಪ್ತ ಸಮಾಲೋಚನೆ ಮೂಲಕ ಬಗೆಹರಿಸಿಕೊಳ್ಳಬಹುದು.