ಬೆಂಗಳೂರು: ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಮೀಸಲಾತಿ ಹೋರಾಟದ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಬಯಸುತ್ತೇನೆ. ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ ಮೋದಿ, ಇಲ್ಲಿನ ಮುಖ್ಯಮಂತ್ರಿ ಬಿಎಸ್ ವೈ ವಿರುದ್ಧ. ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು ಎಂದು ಗುಡುಗಿದ್ದಾರೆ.
ದೊಡ್ಡ ನಾಯಕರೇ ಬಿಜೆಪಿಗೆ, 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ: ರಮೇಶ್ ಜಾರಕಿಹೊಳಿ
ಇದೇ ವೇಳೆ ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇಕಡಾ 73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ ಬಿಜೆಪಿ ಕೈಲಿದೆ ಎಂದು ಹೇಳಿದ್ದಾರೆ.