alex Certify ಸಂಪುಟ ವಿಸ್ತರಣೆಯೋ, ಪುನಾರಚನೆಯೋ: ಜೆ.ಪಿ ನಡ್ಡಾ ಭೇಟಿಯಾದ ಸಿಎಂ ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಪುಟ ವಿಸ್ತರಣೆಯೋ, ಪುನಾರಚನೆಯೋ: ಜೆ.ಪಿ ನಡ್ಡಾ ಭೇಟಿಯಾದ ಸಿಎಂ ಹೇಳಿದ್ದೇನು…?

ನವದೆಹಲಿ: ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ಪ್ರಕಟವಾಗುವ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ಕೊಂಚ ನಿರಾಸೆಯಾಗಿದೆ.

ಜೆ.ಪಿ.ನಡ್ಡಾ ಭೇಟಿಯಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ ಸಿಎಂ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ವರಿಷ್ಠರು ಚರ್ಚೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ಜೆ.ಪಿ.ನಡ್ಡಾ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದರು.

ಇನ್ನು ಎರಡು ಮೂರು ದಿನಗಳಲ್ಲಿ ವರಿಷ್ಠರು ತಮ್ಮ ನಿರ್ಧಾರ ತಿಳಿಸುತ್ತಾರೆ. ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬುದನ್ನು ವರಿಷ್ಠರೇ ನಿರ್ಧರಿಸಲಿದ್ದಾರೆ ಎಂದು ಹೇಳಿದರು. ಈ ಮೂಲಕ ಸಚಿವಾಕಾಂಕ್ಷಿಗಳ ಎದೆಯಲ್ಲಿ ಮತ್ತೆ ಢವಧವ ಶುರುವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...