ನವದೆಹಲಿ/ಬೆಂಗಳೂರು: ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು, ಸಂಸತ್ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಾತನಾಡುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ 16ಕ್ಕೂ ಹೆಚ್ಚು ವಿಪಕ್ಷಗಳು ರಾಷ್ಟ್ರಪತಿ ಭಾಷಣ ಬಹಿಷ್ಕರಿಸಿವೆ.
ರೈತರ ಹೋರಾಟ ಬೆಂಬಲಿಸಿ, ರೈತರ ಬಗ್ಗೆ ಕೇಂದ್ರ ಸರ್ಕಾರದ ಕಠಿಣ ನಿಲುವನ್ನು ಖಂಡಿಸಿ ಕಾಂಗ್ರೆಸ್, ಎನ್.ಸಿ.ಪಿ., ಜೆಡಿಎಸ್, ನ್ಯಾಷನಲ್ ಕಾನ್ಫರೆನ್ಸ್, ಆಪ್ ಸೇರಿದಂತೆ 16 ಪ್ರತಿಪಕ್ಷಗಳು ರಾಷ್ಟ್ರಪತಿ ಭಾಷಣ ಬಹಿಷ್ಕರಿಸಿವೆ.
ಆಧಾರ್, ಪಡಿತರ ಚೀಟಿ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ನಿವೇಶನ ನೀಡಲು ಅರ್ಜಿ ಆಹ್ವಾನ
ರಾಷ್ಟ್ರಪತಿ ಭಾಷಣ ಬಹಿಷ್ಕರಿಸುವುದಾಗಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕೂಡ ಟ್ವೀಟ್ ಮೂಲಕ ತಿಳಿಸಿದ್ದು, ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ವಿರೋಧಿಸಿ, ರೈತರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಜೆಡಿಎಸ್ ಕೂಡ ರಾಷ್ಟ್ರಪತಿ ಭಾಷಣ ವೇಳೆ ಭಾಗಿಯಾಗದಿರಲು ನಿರ್ಧರಿಸಿದೆ. ಅಧಿವೇಶನಕ್ಕೆ ತಾವು ತೆರಳದೇ ಬೆಂಗಳೂರಿನಲ್ಲಿಯೇ ಇರುವುದಾಗಿ ತಿಳಿಸಿದ್ದಾರೆ.