alex Certify ಸಂಸದೆ‌ ಶೋಭಾ ಕರಂದ್ಲಾಜೆಗೆ ಜೀವ ಬೆದರಿಕೆ ಕರೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಸದೆ‌ ಶೋಭಾ ಕರಂದ್ಲಾಜೆಗೆ ಜೀವ ಬೆದರಿಕೆ ಕರೆ..!

ರಾಜಕಾರಣಿಗಳಿಗೆ, ಸಾಮಾಜಿಕ ಹೋರಾಟಗಾರರಿಗೆ ಬೆದರಿಕೆ ಕರೆ ಬರುವುದು ಹೊಸದೇನಲ್ಲ. ಇದೀಗ ಸಂಸದೆ ಶೋಭಾ ಕರಂದ್ಲಾಜೆಗೆ ದುಬೈ, ಮಸ್ಕತ್‌ನಿಂದ ನಿರಂತರವಾಗಿ ಬೆದರಿಕೆಗಳು ಬರುತ್ತಿವೆಯಂತೆ. ಈ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಅವರೇ ವಿಡಿಯೋ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಹಿಂದೂ ಕಾರ್ಯಕರ್ತನಿಗೆ ಮಸ್ಕತ್ ನಲ್ಲಿ ಹಲ್ಲೆ ಮಾಡಿದ್ದರು. ಆ ಘಟನೆಯ ವಿರುದ್ಧ ನಾನು ಆಕ್ರೋಶ ವ್ಯಕ್ತಪಡಿಸಿದ್ದೆ. ಅಷ್ಟೇ ಅಲ್ಲ ಗೃಹ ಸಚಿವ ಅಮಿತ್ ಶಾ ಅವರಿಗೆ ಕೂಡ ಈ ಬಗ್ಗೆ ಪತ್ರ ಬರೆದಿದ್ದೆ. ಹೀಗಾಗಿ ನನಗೆ ದುಬೈ, ಮಸ್ಕತ್ ನಿಂದ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ಹಲವಾರು ಅಶ್ಲೀಲ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ನಾನು ನಿರಂತರವಾಗಿ ಕೆಲಸದಲ್ಲಿ ತೊಡಗಿದ್ದೇನೆ. ಜನರ ಸೇವೆಯಲ್ಲಿ ನಿರತಳಾಗಿದ್ದೇನೆ. ಒಂದು ದಿನವೂ ನಾನು ವಿಶ್ರಾಂತಿಯನ್ನು ತೆಗೆದುಕೊಂಡಿಲ್ಲ. ಆದರೂ ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಇದೆಲ್ಲ ದುರುದ್ದೇಶದಿಂದಲೇ ಮಾಡುತ್ತಿರುವುದು. ಎರಡ್ಮೂರು ವರ್ಷಗಳಿಂದ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಈ ಬೆದರಿಕೆ ಕರೆಗಳ ಬಗ್ಗೆ ನಾನು ಪೊಲೀಸರಿಗೆ ದೂರು ಕೊಟ್ಟರು ಪ್ರಯೋಜನವಾಗಿಲ್ಲ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...