alex Certify ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಸಂಸದ ಉಮೇಶ್ ಜಾಧವ್ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಂಸದರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಸ್ವತಃ ಉಮೇಶ್ ಜಾಧವ್ ಮಾಹಿತಿ ನೀಡಿದ್ದು, ತಮಗೆ ಸಣ್ಣದಾಗಿ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಟ್ವಿಟ್ ಮಾಡಿದ್ದಾರೆ.

ಕಲಬುರಗಿ ಸಂಸದರಾಗಿರುವ ಉಮೇಶ್ ಜಾಧವ್ ಅವರಿಗೆ ಕಳೆದ ತಿಂಗಳು ಕೊರೊನಾ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಇದೀಗ ಮತ್ತೆ ಅನಾರೋಗ್ಯದಿಂದ ಸಂಸದರು ಅಸ್ಪತ್ರೆಗೆ ದಾಖಲಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...