ಮೈಸೂರು; ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದ್ದು, ಸಂಸ್ಕೃತ ವಿದ್ವಾಂಸ ಡಾ.ಲಕ್ಷ್ಮೀತಾತಾಚಾರ್ (84) ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯ ದೇವಾಲಯದ ಸಂಸ್ಕೃತ ವಿದ್ವಾಂಸರಾಗಿದ್ದ ಲಕ್ಷ್ಮೀತಾತಾಚಾರ್ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ವಾರದ ಹಿಂದೆ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಒಂದೇ ಶ್ವಾಸಕೋಶ ಹೊಂದಿದ್ದರೂ ಕೊರೊನಾ ಸೋಲಿಸಿದ ನರ್ಸ್..!
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.