alex Certify ಸಚಿವ ಆನಂದ್ ಸಿಂಗ್ ವಿರುದ್ಧ ಕಿಡಿಕಾರಿದ ಶಾಸಕ ಸೋಮಶೇಖರ್ ರೆಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಆನಂದ್ ಸಿಂಗ್ ವಿರುದ್ಧ ಕಿಡಿಕಾರಿದ ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿಸಿ, ವಿಭಜನೆ ಹೆಸರಲ್ಲಿ ಒಡಕು ಮೂಡಿಸುತ್ತಿರುವ ಸಚಿವ ಆನಂದ್ ಸಿಂಗ್ ಅವರು ನಮಗೆ ಬೇಡ. ಅವರನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಕೈಬಿಡಬೇಕು ಎಂದು ಶಾಸಕ ಸೋಮಶೇಖರ ರೆಡ್ಡಿ ಆಗ್ರಹಿಸಿದ್ದಾರೆ.

ನೂತನ ವಿಜಯನಗರ ಜಿಲ್ಲೆ ಅಧಿಕೃತ ಘೋಷಣೆ ಬೆನ್ನಲ್ಲೇ ಮಾತನಾಡಿದ ಸೋಮಶೇಖರ್ ರೆಡ್ಡಿ, ಬಳ್ಳಾರಿಯನ್ನು ವಿಭಜನೆ ಮಾಡಿರುವ ಸರ್ಕಾರದ ಕ್ರಮ ನೋವು ತಂದಿದೆ. ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರನ್ನು ಬದಲಾವಣೆ ಮಾಡಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಷ ಬದಲಾವಣೆ ಮಾಡುವವರ ಮಾತು ಕೇಳಿ ಜಿಲ್ಲೆಯನ್ನೇ ಇಬ್ಭಾಗ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ 2 ದಿನಗಳ ಕಾಲ ಬ್ಯಾಂಕ್ ಮುಷ್ಕರಕ್ಕೆ ಕರೆ

ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯಂತೆಯೇ ಈಗ ಬಳ್ಳಾರಿಯಲ್ಲಿಯೂ ಕ್ಯಾತೆ ಆರಂಭವಾಗಲಿದೆ. ಆಂಧ್ರದಿಂದ ಬಳ್ಳಾರಿ ಕೇವಲ 10 ಕಿ.ಮೀ. ಈಗ ಬಳ್ಳಾರಿ ವಿಭಜನೆ ಮಾಡಿರುವುದರಿಂದ ವಿವಾದದ ಕಿಡಿಹೊತ್ತಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಜಿಲ್ಲೆಯನ್ನು ವಿಭಜನೆ ಮಾಡಿಸಿರುವ ಸಚಿವರು ನಮಗೆ ಬೇಕಾಗಿಲ್ಲ. ಮೊದಲು ಬೇರೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಿ. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...