alex Certify ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಶಾಸಕ ಮಹೇಶ್ ಕುಮಟಳ್ಳಿಗೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಶಾಸಕ ಮಹೇಶ್ ಕುಮಟಳ್ಳಿಗೆ ಶಾಕ್

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟಿಸುತ್ತಿರುವ ಕಾರಣ ಸರ್ಕಾರ ಇದರ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಹೀಗಾಗಿ ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆಯಾಗಲಿ ಅಥವಾ ನಿಗಮ – ಮಂಡಳಿ ನೇಮಕಾತಿಯಾಗಲಿ ಇಲ್ಲವೆಂದು ಹೇಳಲಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಪುಟಕ್ಕೆ ಸೇರ್ಪಡೆಗೊಳ್ಳುವ ನಿರೀಕ್ಷೆಯಲ್ಲಿದ್ದ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿಯವರಿಗೆ ಸದ್ಯಕ್ಕೆ ಸಚಿವರಾಗುವ ಭಾಗ್ಯ ಇಲ್ಲವೆಂದು ಹೇಳಲಾಗಿದೆ. ಮಹೇಶ್ ಕುಮಟಳ್ಳಿಯವರ ರಾಜಕೀಯ ಗುರು ರಮೇಶ್ ಜಾರಕಿಹೊಳಿ ಕೂಡಾ ಇದೇ ಮಾತುಗಳನ್ನಾಡಿದ್ದಾರೆ.

ಅಥಣಿ ತಾಲೂಕಿನ ಝಂಜರವಾಡ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರದ ಮುಂದೆ ಕೊರೊನಾ ಎದುರಿಸುವ ಸವಾಲು ಎದುರಾಗಿದೆ. ಹೀಗಾಗಿ ಸಂಪುಟ ವಿಸ್ತರಣೆ ಮಾಡುವ ಪ್ರಸ್ತಾವನೆ ಸದ್ಯಕ್ಕಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...