alex Certify ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಸದ್ಯಕ್ಕಿಲ್ಲ ಸಿಹಿಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಸದ್ಯಕ್ಕಿಲ್ಲ ಸಿಹಿಸುದ್ದಿ

ನವದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ನಿಂದ ಹಸಿರು ನಿಶಾನೆ ಪಡೆದಿದ್ದಾರೆನ್ನಲಾಗಿದ್ದು, ಹೀಗಾಗಿ ನಾಳೆಯಿಂದ ಆರಂಭವಾಗುವ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆಯಾಗಲಿದೆ ಎಂದು ಭಾವಿಸಲಾಗಿತ್ತು.

ಇದಕ್ಕೆ ಪುಷ್ಟಿ ನೀಡುವಂತೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಕೆಲವರು, ತಾವು ಸಚಿವರಾಗಿಯೇ ಸೋಮವಾರದ ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸುವುದಾಗಿ ಹೇಳಿದ್ದರು. ಆದರೆ ಸಚಿವಾಕಾಂಕ್ಷಿಗಳ ನಿರೀಕ್ಷೆ ಸದ್ಯಕ್ಕೆ ಈಡೇರುವುದಿಲ್ಲವೆಂದು ಹೇಳಲಾಗಿದೆ.

ಯಡಿಯೂರಪ್ಪನವರ ಸಂಪುಟಕ್ಕೆ ಯಾರು ಸೇರ್ಪಡೆಯಾಗಬೇಕು ಎಂಬ ಕುರಿತು ಬಿಜೆಪಿ ಹೈಕಮಾಂಡ್ ಈವರೆಗೆ ಯಾವುದೇ ಸೂಚನೆ ರವಾನಿಸಿಲ್ಲವಾದ ಕಾರಣ ವಿಧಾನ ಮಂಡಲ ಅಧಿವೇಶನದ ಬಳಿಕ ಅಂದರೆ ಅಕ್ಟೋಬರ್ ತಿಂಗಳಿನಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...