alex Certify ಸನ್ಮಾನ ಮಾಡಿಸಿಕೊಂಡಿದ್ದ ಪಿಎಸ್ಐ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸನ್ಮಾನ ಮಾಡಿಸಿಕೊಂಡಿದ್ದ ಪಿಎಸ್ಐ ಸಸ್ಪೆಂಡ್

ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ ವಿವಾದಕ್ಕೆ ಕಾರಣರಾಗಿದ್ದ ವಿಜಯಪುರ ಜಿಲ್ಲೆ ಚಡಚಣ ಠಾಣೆ ಪಿಎಸ್ಐ ಮಹಾದೇವ ಎಲಿಗಾರ ಅವರನ್ನು ಅಮಾನತು ಮಾಡಲಾಗಿದೆ.

ಲಾಕ್ ಡೌನ್ ಜಾರಿಯಲ್ಲಿದ್ದ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭವನ್ನು ಸ್ಥಗಿತಗೊಳಿಸಬೇಕಿದ್ದ ಪಿಎಸ್ಐ ಸ್ವತಃ ತಾವೇ ಪಾಲ್ಗೊಂಡಿದ್ದು ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮಹಾದೇವ ಎಲಿಗಾರ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಅಮಾನತುಗೊಳಿಸಿದ್ದು, ಮಹಾದೇವ ಎಲಿಗಾರ ವಿರುದ್ಧ ಈ ಹಿಂದೆ ಸಾಕಷ್ಟು ಆರೋಪಗಳು ಕೇಳಿಬಂದಿದ್ದವು. ಹೀಗಾಗಿ ಚಡಚಣ ಠಾಣೆಯಿಂದ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ವರ್ಗಾವಣೆ ಮಾಡಲಾಗಿದ್ದರೂ ಕೆಲಸಕ್ಕೆ ಗೈರು ಹಾಜರಾಗಿದ್ದರು. ಹೀಗಾಗಿ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...