ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಈಗ ಒಂದು ವರ್ಷ ತುಂಬಿದೆ. ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ನೆರೆ ಪರಿಸ್ಥಿತಿಯ ಸವಾಲು ಎದುರಿಸಿದ್ದ ಯಡಿಯೂರಪ್ಪನವರಿಗೆ ಈಗ ಎದುರಾಗಿರುವ ಕೊರೊನಾ ಮತ್ತೊಂದು ಸವಾಲನ್ನು ಒಡ್ಡಿದೆ.
ಕೊರೊನಾ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳುತ್ತಿದ್ದು, ಇದರ ಜೊತೆಜೊತೆಗೆ ಸರ್ಕಾರ ನಡೆಸಲು ಆರ್ಥಿಕ ಸಂಪನ್ಮೂಲಗಳನ್ನು ಕ್ರೋಡೀಕರಿಸುವ ಅನಿವಾರ್ಯತೆಯೂ ಇದೆ. ಹಾಗೆಯೇ ರೈತರು,ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲ ವರ್ಗದ ಜನತೆಗೆ ನೆರವಾಗಬೇಕಿದೆ.
ಇದರ ಮಧ್ಯೆ ರೈತರಿಗೆ ನೆರವಾಗುವ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸಹಕಾರ ಇಲಾಖೆಗೆ ಮಹತ್ವದ ಸೂಚನೆ ನೀಡಿದ್ದು, ಮುಂದಿನ ಹಣಕಾಸು ವರ್ಷದಲ್ಲಿ 20 ಸಾವಿರ ಕೋಟಿ ರೂ. ಕೃಷಿ ಸಾಲ ನೀಡುವ ಗುರಿ ಇಟ್ಟುಕೊಳ್ಳುವಂತೆ ಹೇಳಿದ್ದಾರೆ.