ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆ ಸಾರಿಗೆ ಸಿಬ್ಬಂದಿ ಮತ್ತೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು.
ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಸಾರ್ವಜನಿಕರು ಆತಂಕಕ್ಕೀಡಾಗುವ ಅಗತ್ಯವಿಲ್ಲ ಎಂದಿದ್ದಾರೆ.
ಸಾರಿಗೆ ಸಿಬ್ಬಂದಿ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ನಾಳೆ ಸಾರಿಗೆ ಸಿಬ್ಬಂದಿಗಳು ನಡೆಸುವ ಪ್ರತಿಭಟನೆಯಿಂದಾಗಿ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಾಗಲ್ಲ. ಸಾರಿಗೆ ಸಂಚಾರ ಯಥಾಸ್ಥಿತಿಯಲ್ಲಿ ಇರುತ್ತದೆ. ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಈ ಬಗ್ಗೆ ಜನರಲ್ಲಿ ಗೊಂದಲ ಬೇಡ ಎಂದರು.
ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ಸಿಬ್ಬಂದಿ; ನಾಳೆ ಪ್ರತಿಭಟನೆ ನಡೆಸಲು ನಿರ್ಧಾರ
ಇನ್ನು ಸಾರಿಗೆ ಸಿಬ್ಬಂದಿಗಳ ವೇತನ ತಾರತಮ್ಯ ಹಂತ ಹಂತವಾಗಿ ಬಗೆಹರಿಸಲಾಗುವುದು. ಅವರ ಎಲ್ಲಾ ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.