ರಾಜ್ಯದ ಜನತೆ ಯುಗಾದಿ ಸಂಭ್ರಮದಲ್ಲಿರುವ ಮಧ್ಯೆ ಮುಂದಿನ ಐದು ದಿನಗಳ ಕಾಲ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡದಲ್ಲಿ ಏಪ್ರಿಲ್ 13 ರಿಂದ ಏಪ್ರಿಲ್ 16 ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗದಲ್ಲಿ ಏಪ್ರಿಲ್ 14 ರಿಂದ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ʼಕೊರೊನಾʼ ಲಸಿಕೆ ಸಿಗದೆ ಈ ಔಷಧಿ ಸೇವನೆ ಮಾಡ್ತಿದ್ದಾರೆ ಫಿಲಿಪೈನ್ಸ್ ಜನ..!
ಇನ್ನು ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆ ಆಗಿರುವುದರಿಂದ ತೇವಾಂಶಭರಿತ ಮೋಡಗಳು ಸೃಷ್ಟಿಯಾಗಿದ್ದು, ಮಳೆಯಾಗಲು ಕಾರಣ ಎಂದು ಹೇಳಲಾಗಿದೆ.