ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ ಇದನ್ನು ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ಹೀಗಾಗಿ ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ರಾಜ್ಯದಾದ್ಯಂತ ಕಂಪ್ಲೀಟ್ ಲಾಕ್ಡೌನ್ ಮಾಡಲಾಗುತ್ತಿದ್ದು, ಸಾರ್ವಜನಿಕರು ಅಷ್ಟರೊಳಗಾಗಿ ಅಗತ್ಯ ವಸ್ತುಗಳನ್ನು ಖರೀದಿಸುವುದು ಸೂಕ್ತ.
ಲಾಕ್ಡೌನ್ ಸಂದರ್ಭದಲ್ಲಿ ಯಾವುದೇ ವಾಹನ ಸಂಚಾರ ಇರುವುದಿಲ್ಲ. ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಇತರೆಯವರು ಒಂದೊಮ್ಮೆ ನಿಯಮ ಉಲ್ಲಂಘಿಸಿ ಮನೆಯಿಂದ ಹೊರಬಿದ್ದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ.