alex Certify ಸಾಲ ಸೌಲಭ್ಯ ಪಡೆಯುವ ಕುರಿತು ಬೀದಿಬದಿ ವ್ಯಾಪಾರಿಗಳಿಗೊಂದು ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲ ಸೌಲಭ್ಯ ಪಡೆಯುವ ಕುರಿತು ಬೀದಿಬದಿ ವ್ಯಾಪಾರಿಗಳಿಗೊಂದು ಮುಖ್ಯ ಮಾಹಿತಿ

ಶಿವಮೊಗ್ಗ: ಕೇಂದ್ರ ಸರ್ಕಾರದ ಆತ್ಮ ನಿರ್ಭರ ನಿಧಿ ಯೋಜನೆಯ ಅಡಿಯಲ್ಲಿ ವಿಶೇಷ ಕಿರು ಸಾಲ ಸೌಲಭ್ಯ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಈ ಕುರಿತಂತೆ ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.

ಈ ವಿಶೇಷ ಯೋಜನೆಯು ಜು.1, 2020 ರಿಂದ ಮಾ.31, 2020 ರ ರವರೆಗೆ ಜಾರಿಯಲ್ಲಿರಲಿದ್ದು, ಬೀದಿ ಬದಿ ವ್ಯಾಪಾರಸ್ಥರಿಗೆ ಬ್ಯಾಂಕುಗಳ ಮೂಲಕ ಹತ್ತು ಸಾವಿರ ರೂಪಾಯಿಗಳವರೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ.

ಹೀಗಾಗಿ ಸಮೀಕ್ಷೆಯಲ್ಲಿ ಗುರುತಿಸಲ್ಪಟ್ಟ ಬೀದಿ ಬದಿ ವ್ಯಾಪಾರಿಗಳು ನಿಗದಿತ ನಮೂನೆಯ ಅರ್ಜಿಯನ್ನು ಮಹಾನಗರಪಾಲಿಕೆಯ ನಲ್ಮ್ ವಿಭಾಗದಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಜು. 20ರೊಳಗಾಗಿ ಸಲ್ಲಿಸಬೇಕಾಗಿದೆ. ಹೆಚ್ಚಿನ ವಿವರಗಳಿಗಾಗಿ ನಗರಪಾಲಿಕೆಯ ನಲ್ಮ್ ವಿಭಾಗವನ್ನು ಸಂಪರ್ಕಿಸಲು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...