ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ವಹಿಸಲಾಗಿದ್ದು, ಇದೀಗ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ನಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಎಸ್ ಐ ಟಿ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
ರಾಸಲೀಲೆ ಸಿಡಿ ಪ್ರಕರಣ; ದೂರು ನೀಡಲು ಮುಹೂರ್ತ ಫಿಕ್ಸ್ ಮಾಡಿದ ರಮೇಶ್ ಜಾರಕಿಹೊಳಿ
ಸೌಮೆಂದು ಮುಖರ್ಜಿ ನೇತೃತ್ವದ 7 ಅಧಿಕಾರಿಗಳ ಎಸ್ ಐ ಟಿ ತಂಡ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ನಡೆಸುತ್ತಿದ್ದು, ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾದ ದೂರಿನನ್ವಯ ತನಿಖೆ ನಡೆಸುತ್ತಿದೆ.