ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಬೆನ್ನಲ್ಲೇ ಆತಂಕಕ್ಕೀಡಾಗಿರುವ ಬಾಂಬೆ ಫ್ರೆಂಡ್ಸ್ ಖ್ಯಾತಿಯ 6 ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ. ಈ ನಡುವೆ ಇಂದು ಮತ್ತೆ 6 ಜನ ಸಚಿವರು ಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾವುದೇ ಭೀತಿಯಿಂದ ಕೋರ್ಟ್ ಮೊರೆ ಹೋಗಿಲ್ಲ. ರಾಜಕೀಯ ಷಡ್ಯಂತ್ರಕ್ಕೆ ನಾವು ಟಾರ್ಗೆಟ್ ಆಗಬಾರದು. 2-3 ನಿಮಿಷಗಳಲ್ಲಿ ತೇಜೋವಧೆ ಮಾಡಿದರೆ ಹೇಗೆ…? ಇಂತಹ ಸುದ್ದಿ ಪ್ರಸಾರಕ್ಕೆ ತಡೆ ನೀಡಬೇಕು. ಹೀಗಾಗಿ ಸಿಟಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದೇವೆ. ಇಂದು ಮತ್ತೆ 6 ಸಚಿವರು ಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದರು.
ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಪುತ್ರ ಅರೆಸ್ಟ್
ಏನೋ ಕ್ರಿಯೇಟ್ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಯಾರು ಷಡ್ಯಂತ್ರ ಮಾಡುತ್ತಿದ್ದಾರೆ ಎಂಬುದು 2-3 ದಿನಗಳಲ್ಲಿ ತಿಳಿಯುತ್ತೆ. ಬಳಿಕ ನಾವು 15 ಜನ ಜಂಟಿ ಸುದ್ದಿಗೋಷ್ಠಿ ನಡೆಸುತ್ತೇವೆ. ಬಾಂಬೆನಲ್ಲಿ ಏನು ಮಾಡಿದೆವು. ಏನೆಲ್ಲಾ ನಡೆಯಿತು ಎಂಬ ಬಗ್ಗೆ ರಾಜ್ಯದ ಜನತೆಗೆ ತಿಳಿಸುತ್ತೇವೆ ಎಂದು ಹೇಳಿದರು.